ಬಾಳಂಬೀಡ ಯೋಜನೆ ಮೂಲಕ ಕೆರೆ ತುಂಬಿಸುವ ಪ್ರಯತ್ನ-ಶಾಸಕ ಮಾನೆ
Jul 02 2024, 01:31 AM ISTಮಳೆ ಆಶಾದಾಯಕವಾಗಿ ಬೀಳುತ್ತಿಲ್ಲ. ತಾಲೂಕಿನ ಜೀವನದಿ ವರದಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚುತ್ತಿಲ್ಲ. ಇಂಥ ಸಂದಿಗ್ಧ ಸಂದರ್ಭದ ಮಧ್ಯೆಯೂ ನದಿಯಲ್ಲಿ ಲಭ್ಯ ಜಲಮೂಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹತ್ವಾಕಾಂಕ್ಷೆಯ ಬಾಳಂಬೀಡ, ತಿಳವಳ್ಳಿ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ-ಕಟ್ಟೆ ತುಂಬಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ.