ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ: ಶಾಸಕ ಜಿ.ಎಚ್.ಶ್ರೀನಿವಾಸ್
Jun 27 2024, 01:02 AM ISTತರೀಕೆರೆ, ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗೋಣ ಎಂದು ಶಾಸಕ ಜಿ.ಎಚ್,ಶ್ರೀನಿವಾಸ್ ಹೇಳಿದ್ದಾರೆ.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ರಂಗನೇಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಲೋಕಸಭಾ ಪಕ್ಷದ ಅಭ್ಯರ್ಥಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಉದ್ಘಾಟಿಸಿ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಿದೆ ಎಂದು ಹೇಳಿದರು.