ಸಿಎಂರಿಂದ ಅರ್ಥವಿಲ್ಲದ ಬಜೆಟ್: ಶಾಸಕ ಚನ್ನಬಸಪ್ಪ
Feb 17 2024, 01:17 AM ISTಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ತಮ್ಮ 15ನೇ ಬಜೆಟ್, ಗ್ಯಾರಂಟಿಗಳ ಅರ್ಥವಿಲ್ಲದ ಆರ್ಥಿಕ ಕೂಪದಲ್ಲಿ ಬಿದ್ದಿರುವುದು ಎದ್ದುಕಾಣುತ್ತಿದೆ. ತಮ್ಮ ತಪ್ಪಿಗೆ ತೇಪೆ ಹಾಕಲು ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುವ ಚಾಳಿಯನ್ನು ಮೈಗೂಡಿಸಿಕೊಂಡಿರುವ ಮಾನ್ಯ ಸಿದ್ದರಾಮಯ್ಯ ಅವರು ಕೇಂದ್ರದ ಪಾಲು ಬಂದಿಲ್ಲ ಎಂದು ಒಂದು ಸುಳ್ಳನ್ನೇ ನೂರು ಸಾರಿ ಪದೇಪದೇ ಹೇಳಿದರೆ ಜನರನ್ನು ತಮ್ಮ ಸುಳ್ಳಿನಿಂದ ನಂಬಿಸಬಹುದು ಎಂದುಕೊಂಡಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯೆಯಲ್ಲಿ ಕಿಡಿಕಾರಿದರು.