3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಅವರಿಂದ ಭೂಮಿಪೂಜೆ
Jan 18 2024, 02:02 AM ISTಪುರಸಭೆ ವ್ಯಾಪ್ತಿಯ ೩.೭ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಎನ್. ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ನಗರದ ಎರಡನೇ ವಾರ್ಡಿನ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ೨೩ಲಕ್ಷ.ರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು ತೆರಳಲು ಮಾರ್ಗವಾಗಿದ್ದು ರಸ್ತೆಗಳು ಗುಂಡಿಬಿದ್ದಿರುವ ಹಿನ್ನಲೆಯಲ್ಲಿ ಓಡಾಟಕ್ಕೆ ತೊಂದರೆಯಾಗಬಾರದೆಂಬ ಸಲುವಾಗಿ ೨೩ ಲಕ್ಷದ ವೆಚ್ಚದಲ್ಲಿ ಮರು ಡಾಬರೀಕರಣ ಮಾಡಲು ಈ ದಿನ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ