ಧಾರ್ಮಿಕ ಕೇಂದ್ರ ಸ್ವಚ್ಛತೆಯ ಬಗ್ಗೆ ಜಾಗೃತಿ ಅವಶ್ಯ: ಶಾಸಕ ಸಿದ್ದು ಸವದಿ
Jan 15 2024, 01:48 AM ISTರಬಕವಿ-ಬನಹಟ್ಟಿ: ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛ ಮಾಡುವ ಮೂಲಕ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಪಟ್ಟಣಗಳು ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಮೂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ರಬಕವಿಯ ಮಲ್ಲಿಕಾರ್ಜುನ, ಬನಶಂಕರಿ, ಮಹಾದೇವರ ದೇವಸ್ಥಾನ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಪಾಲನೆಯೊಂದಿಗೆ ಪಾವಿತ್ರ್ಯ ರಕ್ಷಣೆ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.