ಭವಿಷ್ಯ ಭದ್ರವಾಗಲು ಓದಿನ ಕಡೆಗೆ ಗಮನವಹಿಸಿ: ಶಾಸಕ
Nov 11 2023, 01:15 AM ISTನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ, ಭೋಗಾಪುರದಲ್ಲಿ ನಿರ್ಮಾಣವಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿವಿನ್ಯಾಸ ಹಾಗೂ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ದಿಗೆ ಶಿಕ್ಷಣವೇ ಮುಖ್ಯ. ಶಿಕ್ಷಣ ಇಲ್ಲದಿದ್ದರೆ ಯಾವುದೇ ಸಾಧನೆ ಸಾಕಾರವಾಗುವುದಿಲ್ಲ. ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.