ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ
Oct 14 2023, 01:01 AM ISTನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮವು ದೇಶ ಪ್ರೇಮ ಬಿಂಬಿಸುವ ಕಾರ್ಯಕ್ರಮವಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತಿ, ನೆಹರು ಯುವಕೇಂದ್ರ, ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ನನ್ನ ಮಣ್ಣು ನನ್ನ ದೇಶ ಅಭಿಯಾನ ಕಾರ್ಯಕ್ರಮದಡಿ ಅಮೃತ ಕಳಸ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.