ವಿಶ್ವ ಕ್ಯಾನ್ಸರ್ ದಿನಾಚರಣೆ ಜಾಗೃತಿ ಜಾಥಾಗೆ ಶಾಸಕ ಎಚ್.ವೈ.ಮೇಟಿ ಚಾಲನೆ
Feb 06 2024, 01:30 AM ISTಬಾಗಲಕೋಟೆ: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಆರೈಕೆಯ ಅಂತರ ಕಡಿತಗೊಳಿಸಿ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ಕ್ಯಾನ್ಸರ್ ಕುರಿತ ಅರಿವು ಮತ್ತು ಜಾಗೃತಿ ಜಾಥಾಗೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಸೋಮವಾರ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಕೋಶ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಗೆ ಚಾಲನೆ ನೀಡಿದರು.