ಚಿಪ್ಪಿನಕಟ್ಟೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ
Jun 04 2025, 01:27 AM ISTಚಿಪ್ಪಿನಕಟ್ಟೆ ಹಾಗೂ ಟಿಪ್ಪು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಮಕ್ಕಳು ಇದ್ದು ಅವರಿಗೂ ಶಾಲಾ ಪೂರ್ವ ಶಿಕ್ಷಣ ಒಳ್ಳೆಯ ರೀತಿಯಲ್ಲಿ ಸಿಗಬೇಕು ಎಂಬುದು ನಮ್ಮ ಆಶಯ. ಹಾಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಬಿಟ್ಟುಕೊಡಲಾಗಿದೆ. ತಮ್ಮ ಮನೆ ಎಂಬಂತೆ ಭಾವಿಸಿ ಕಟ್ಟಡ ಹಾಗೂ ಸೌಲಭ್ಯಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕರೆ ನೀಡಿದರು. ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಮಾತನಾಡಿ, ಮನುಷ್ಯನಿಗೆ ಪ್ರಮುಖವಾಗಿ ಅಗತ್ಯವಿರುವ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸಲು ಸ್ಥಳೀಯ ಶಾಸಕರು ಮುಂದಾಗಿದ್ದು, ಒಳ್ಳೆಯ ಕಟ್ಟಡ ನಿರ್ಮಿಸಿ ಮಕ್ಕಳಿಗೆ ಕೊಡುಗೆಯಾಗಿ ನೀಡಿರುವುದು ಶ್ಲಾಘನೀಯ ಎಂದರು.