ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ಅಗತ್ಯ: ಶಾಸಕ ಶರತ್ ಬಚ್ಚೇಗೌಡ
Jan 31 2025, 12:48 AM ISTಪಂಚ ಗ್ಯಾರಂಟಿಗಳನ್ನು ನೀಡುವುದರ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸುವ ದೃಷ್ಟಿಯಿಂದ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಜೊತೆಗೆ ಶಾಸಕರ ಅನುದಾನವನ್ನು ಸಹ ಬಳಕೆ ಮಾಡಿಕೊಂಡು ಅತ್ತಿವಟ್ಟ, ತವಟಹಳ್ಳಿ, ಉಮ್ಮಲು, ಗೂಗುಟ್ಟಹಳ್ಳಿ, ವಳಗೆರೆಪುರ ಗ್ರಾಮಗಳಲ್ಲಿ 3 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮಗಳಿಗೆ ಮತ್ತಷ್ಟು ಅಭಿವೃದ್ಧಿಗೆ ಅನುದಾನವನ್ನು ಒದಗಿಸಲಾಗುವುದು.