ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ
Jun 18 2025, 11:48 PM ISTಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಹೇಳಿದರು.