ಬೆಳೆ ಸಮೀಕ್ಷೆಯಲ್ಲಿ ರೈತರಿಗೆ ಅನ್ಯಾಯ- ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಲಮಾಣಿ
Sep 07 2025, 01:00 AM IST೨೦೨೫ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚನೆ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಿದ್ದು, ಈ ಬಾರಿ ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡದೇ ತಪ್ಪು ಮಾಹಿತಿ ನೀಡಿದ್ದು, ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.