ಕಳಪೆ ಕಾಮಗಾರಿ ಆರೋಪ ಸುಳ್ಳು ಎಂದ ಶಾಸಕ ಸುರೇಶ್
Jul 20 2025, 01:15 AM ISTಹಲ್ಮಿಡಿ ಗ್ರಾಮದ ರಸ್ತೆಗೆ 6 ಕೋಟಿ ರು. ಅನುದಾನ ತಂದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗಿದೆ. ಜೆಜೆಎಂ ಕಾಮಗಾರಿ ನಡೆದ ಸ್ಥಳದಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಾಣಿಸಿದ್ದು, ಇದನ್ನೇ ನೆಪ ಮಾಡಿ ಕಳಪೆ ಕಾಮಗಾರಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಕಿಡಿಕಾರಿದರು. ಕೆಲ ಕಾಂಗ್ರೆಸ್ ಮುಖಂಡರು, ಸದಸ್ಯರು ಮೊಸರಿನಲ್ಲಿ ಕಲ್ಲು ಹುಡುಕುವಂತೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.