ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್
Dec 20 2024, 12:45 AM ISTಉಡುಪಿಯ ಎಲ್ಲೂರೂ ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆ.ವಿ. ವಿದ್ಯುತ್ ಲೈನ್ ಯೋಜನೆಯಲ್ಲಿ ಸರ್ಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗುರುವಾರ ಶಾಸಕ ವಿ. ಸುನಿಲ್ ಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಗಮನ ಸೆಳೆದರು.