ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲು ಪಣ ತೊಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಸಚಿವರು, ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮುನಿಸು ಶಮನ ಮಾಡುವಲ್ಲಿ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ. ಆದರೆ, ಕ್ಷೇತ್ರದಲ್ಲಿ ಅಸಮಾಧಾನ ಹೊಗೆಯಾಡುತ್ತಲೇ ಇದೆ.
ಕಾಂಗ್ರೆಸ್ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಅವರು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು, ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್ನಲ್ಲಿ ಬಂದು, ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.