ಖಾಸಗಿ ಶಾಲೆಗಳು 2025-26ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿದ್ದು, ಬಹಳಷ್ಟು ಅನುದಾನರಹಿತ ಶಾಲೆಗಳು ಶೇಕಡ 15ರಿಂದ 20ರಷ್ಟು ಪ್ರವೇಶ ಶುಲ್ಕ ಹೆಚ್ಚಿಸಿವೆ. ಇದರಿಂದ ಪೋಷಕರಿಗೆ ಕಳೆದಬಾರಿಗಿಂತ ಹೆಚ್ಚಿನ ಶುಲ್ಕದ ಹೊರೆಬಿದ್ದಿದೆ.
ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.
ಜವಹಾರ್‌ಲಾಲ್ ನೆಹರು ತಾರಾಲಯದ ಸ್ಕೈ ಥಿಯೇಟರ್ ಪ್ರವೇಶ ಶುಲ್ಕವೂ ಶೇ.25ರಷ್ಟು ಹೆಚ್ಚಳವಾಗಿದೆ. ವಯಸ್ಕರ ಪ್ರವೇಶಕ್ಕೆ ಹಾಲಿ ದರ ₹75 ರಿಂದ ₹100ಕ್ಕೆ ಏರಿಕೆಯಾಗಿದ್ದು, ಪರಿಷ್ಕೃತ ದರ ಏ.1ರಿಂದಲೇ ಜಾರಿಗೆ ಬರಲಿದೆ.
‘ಹೋಟೆಲ್‌ಗಳಲ್ಲಿ ತಿಂಡಿ, ತಿನಿಸು, ಊಟದ ಬಿಲ್‌ಗಳ ಮೇಲಿನ ಸೇವಾ ಶುಲ್ಕ (ಸರ್ವೀಸ್ ಚಾರ್ಜ್) ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ. ಅದು ಸ್ವಯಂಪ್ರೇರಿತ. ಹೋಟೆಲ್‌ಗಳು ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.