ಕೃಷಿ ತಳಿ ಸಂಶೋಧನೆ, ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಉತ್ತೇಜನ ನೀಡಿ
Dec 15 2023, 01:30 AM ISTಕೃಷಿ ತಳಿ ಸಂಶೋಧನಾ ಚಟುವಟಿಕೆ ಹಾಗೂ ಮೆಣಸಿನಕಾಯಿ, ಮೆಕ್ಕೆಜೋಳ ಹಾಗೂ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಆಧಾರಿತ ಸಣ್ಣ ಕೈಗಾರಿಕಾ ಘಟಕಗಳು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆರಂಭಿಸುವ ಕುರಿತಂತೆ ರೈತರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಉತ್ತೇಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಕೃಷಿ ಆಧಾರಿತ ಆಹಾರ ಸಂಸ್ಕರಣೆ, ತಳಿ ಅಭಿವೃದ್ಧಿಯಂತಹ ಚಟುವಟಿಕೆಗೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಿದ್ದಾರೆ.