ದರ್ಶನದ ವ್ಯವಸ್ಥೆಗೆ ಸಂಸದ ಸುನೀಲ್ ಬೋಸ್ ಮೆಚ್ಚುಗೆ
Oct 12 2025, 01:00 AM ISTಸಂಸದ ಸುನೀಲ್ ಬೋಸ್ ಅವರು ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದರು. ದೇವಾಲಯದ ಒಳಗೆ ಮತ್ತು ಹೊರಗಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳ ಅಚ್ಚುಕಟ್ಟಾದ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಕ್ತರು ಯಾವುದೇ ತೊಂದರೆ ಇಲ್ಲದೆ, ಸುಗಮವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಶ್ರಮ ಪ್ರಶಂಸನೀಯ ಎಂದರು. ಹಾಸನಾಂಬೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಕ್ತರ ಭಕ್ತಿ ಪರವಶದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಮಂದಿ ದಿನವೂ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಸಂಸದರು ದೇವಾಲಯದ ಒಳಭಾಗದಲ್ಲಿ ದೇವಿಯ ಪಾದಪೂಜೆ ಸಲ್ಲಿಸಿ, ತಮ್ಮ ಕುಟುಂಬದವರೊಂದಿಗೆ ವಿಶೇಷ ಪೂಜೆ ನೆರವೇರಿಸಿದರು.