ಸಚಿವ ಗಡ್ಕರಿ ಭೇಟಿ ಮಾಡಿದ ಸಂಸದ ಶ್ರೇಯಸ್
Dec 13 2024, 12:49 AM ISTಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಅನುಮೋದನೆಗಾಗಿ ಮನವಿ ಸಲ್ಲಿಸಿದರು. ಪ್ರಸ್ತುತ ಡಿಪಿಆರ್ ಹಂತದಲ್ಲಿರುವ ಹಾಸನ ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.