ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಕಾಂಗ್ರೆಸ್ ದುಂಬಾಲು
Mar 29 2024, 12:47 AM ISTಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಕಾಂಗ್ರೆಸ್ ನಾಯಕರು ಗುರುವಾರ ರಾತ್ರಿ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಭೇಟಿ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಮುನಿಸು ಮರೆತು ಸಹಕಾರ ನೀಡಲು ಕೋರಿದ್ದಾರೆ.