ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಸಹಿತ ನಾಲ್ವರ ಹೆಸರು ಪರಿಶೀಲನೆ
Mar 08 2024, 01:48 AM ISTದೆಹಲಿಯಲ್ಲಿ ಬುಧವಾರ ನಡೆದ ಅಭ್ಯರ್ಥಿಗಳ ಆಯ್ಕೆ ಕುರಿತ ಸಭೆಯಲ್ಲಿ ಈ ನಾಲ್ಕು ಹೆಸರು ಚರ್ಚೆಗೆ ಬಂದಿದೆ. ಅಂತಿಮವಾಗಿ ಈ ನಾಲ್ವರ ಹೆಸರನ್ನು ಶಿಫಾರಸು ಮಾಡಿ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದು, ಅಲ್ಲಿ ಒಬ್ಬರ ಹೆಸರು ಅಂತಿಮಗೊಂಡು ಘೋಷಣೆಯಾಗಲಿದೆ. ಇಲ್ಲವೇ ಬೇರೆಯೇ ಹೊಸ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ ಎನ್ನುತ್ತವೆ ಮೂಲ.