ಶಿವಯೋಗಿ ಸಿದ್ಧರಾಮೇಶ್ವರರು ಕಾಯಕಯೋಗಿ: ಸಂಸದ ಪಿ.ಸಿ. ಗದ್ದಿಗೌಡರ
Jan 16 2024, 01:45 AM ISTಬಾಗಲಕೋಟೆ: ಆಚಾರ ವಿಚಾರಗಳೊಂದಿಗೆ ಸಕಲ ಜೀವಿಗಳಿಗಳ ಒಳತಿಗಾಗಿ ಕೆರೆ, ಕಟ್ಟೆ, ಬಾವಿ ನಿರ್ಮಿಸಿ, ನೀರಿನ ಮಹತ್ವ ತಿಳಿಸಿಕೊಡಲು ಶ್ರಮಿಸಿದ ಶಿವಯೋಗಿ ಸಿದ್ಧರಾಮೇಶ್ವರರು ಕಾಯಕಯೋಗಿಯಾಗಿದ್ದರು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಕಾಯಕವಾಗಲಿ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಮಾಡಬೇಕು ಎಂದರು.