ಜೆಜೆಎಂ ಯೋಜನೆಯಲ್ಲಿ ಭ್ರಷ್ಟಾಚಾರ: ಸಂಸದ ಕರಡಿ

Dec 02 2023, 12:45 AM IST
ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.ಪಟ್ಟಣದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಇದು ₹೧೨೩ ಕೋಟಿ ಯೋಜನೆ. ಸಂಸದರಿಂದ ಹಿಡಿದು ಎಲ್ಲರೂ ಲೂಟಿ ಮಾಡಿದ್ದಾರೆ. ಇರಲಿ, ನನ್ನನ್ನೂ ಸೇರಿ ಹೇಳುವೆ. ಈ ಯೋಜನೆ ಬಗ್ಗೆ ನಾನು ಬಹಿರಂಗವಾಗಿಯೇ ಹೇಳುವೆ. ನಾವೇನು ಹರಿಶ್ಚಂದ್ರರಲ್ಲ. ನ್ಯಾಯ, ಅನ್ಯಾಯ ನೋಡಬೇಕು. ಅನ್ಯಾಯದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಕೂಡ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡ್ತಾರೆ. ಇದೆಲ್ಲ ಬಿಟ್ಟು ಜನರ ಸೇವೆ ಮಾಡಬೇಕೆಂದರು.

ವಿಜಯೇಂದ್ರಗೆ ಬಿಜೆಪಿ ಸಂಘಟಿಸುವ ಶಕ್ತಿಯಿದೆ: ಸಂಸದ ರಾಘವೇಂದ್ರ

Nov 30 2023, 01:15 AM IST
ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು. ನಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ. ನಮ್ಮ ಮುಂದಿನ ಯುವಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಯಡಿಯೂರಪ್ಪ ಅವರ ಆಸೆಯಂತೆ ಯುವಕರಿಗೆ ಉದ್ಯೋಗ ಸಿಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಯಶಸ್ವಿಯಾಗಬೇಕಿದೆ. ಮೊನ್ನೆಯಾದ ಸೋಲನ್ನು ಸುಳ್ಳು ಎಂಬುವುದನ್ನು ತೋರಿಸಬೇಕಿದೆ ಎಂದು ಕರೆ ನೀಡಿದರು.