ನಿರಾಶ್ರಿತರ ಹೋರಾಟಕ್ಕೂ ಸಂಸದ ಸಂಗಣ್ಣ ಕರಡಿ ಬೆಂಬಲ
Nov 25 2023, 01:15 AM ISTಕೊಪ್ಪಳ ನಗರದ ವಸತಿ ನಿರಾಶ್ರಿತರಿಗೆ ಆಶ್ರಯ ನಿವೇಶನ,ಮನೆ ನೀಡಲು ಒತ್ತಾಯಿಸಿ ವಸತಿ ನಿರಾಶ್ರಿತರ ಹೋರಾಟ ಸಮಿತಿ ನಗರಸಭೆ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 10ನೇ ದಿನಕ್ಕೆ ಕಾಲಿಟ್ಟಿದ್ದು, ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ವಸತಿ ನಿರಾಶ್ರಿತರಿಗೆ ಆಶ್ರಯ ನಿವೇಶನ, ಮನೆ ಸೇರಿದಂತೆ ಅವರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಎಂದರು. ವಸತಿ ನಿರಾಶ್ರಿತರ ಹೋರಾಟ ಸಮಿತಿಯ ಸಂಚಾಲಕ ಸಂಜಯದಾಸ ಕೌಜಗೇರಿ ಮಾತನಾಡಿ, ಕಳೆದ 10 ದಿನಗಳಿಂದ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.