ಶಿವಸಾಗರ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ
Jul 09 2024, 12:58 AM ISTತಾಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕ್ರಮ ಖಂಡಿಸಿ ರೈತರು ಧರಣಿ ಮುಂದುವರಿಸಿದ್ದು, ಸೋಮವಾರವೂ ಧರಣಿ ನಡೆಸಿದರು. ಕಾರ್ಖಾನೆಗೆ ಷೇರು ನೀಡಿದ ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಬಾಕಿ ಬಿಲ್‌ಪಾವತಿ ಮಾಡಬೇಕು. ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.