ಹೇಮಾವತಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
Jul 02 2025, 11:47 PM ISTಚನ್ನರಾಯಪಟ್ಟಣ ತಾಲೂಕಿನ ರೈತರ, ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಸಮಗ್ರ ಅಭಿವೃದ್ಧಿಗೆ ರೈತರು ಸಹಕರಿಸಬೇಕು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಮನವಿ ಮಾಡಿದರು. ಕಬ್ಬು ಬೆಳೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿತ್ತನೆ ಬೀಜವನ್ನು ಸಾಲದ ರೂಪದಲ್ಲಿ, ಹನಿ ನೀರಾವರಿ ಪದ್ಧತಿ ಅಳವಡಿಕೆಗೆ ಸಹಾಯಧನವನ್ನು ಕಾರ್ಖಾನೆಯಿಂದ ನೀಡಲಾಗುತ್ತಿದೆ. ಕಬ್ಬು ಕಟಾವಿನ ವಿಚಾರದಲ್ಲಿ ತೊಂದರೆಯಾಗದ ರೀತಿಯಲ್ಲಿ ೩೦೦ ಕಾರ್ಮಿಕರನ್ನು ಕರೆತರಲಾಗಿದೆ. ಯಾವುದೇ ಸಮಸ್ಯೆಗೆ ಆಸ್ಪದ ಕೊಡದ ರೀತಿಯಲ್ಲಿ ಕಾರ್ಖಾನೆ ಉಳಿಸಲು ರೈತರು ಮುಂದಾಗಬೇಕು ಎಂದರು.