ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇ.60 ಪರ್ಸೇಂಟ್ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್ ಪಾರ್ಟಿ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.