ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಸಾವು ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಸೋಮವಾರ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಬೆಂಗಳೂರು ಮಹಾನಗರ ಆಡಳಿತದ ನಿರ್ವಹಣೆಗಾಗಿ ಜಾರಿಗೊಳಿಸಲು ಉದ್ದೇಶಿಸಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ವನ್ನು ಈ ವರ್ಷ ಸ್ಥಾಪಿಸುವುದಿಲ್ಲ, ಹೊಸದಾಗಿ ರಚನೆ ಮಾಡಲಿರುವ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ