ನೇಮಕಾತಿಯಲ್ಲಿ ಸರ್ಕಾರ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಿ
Jan 07 2024, 01:30 AM ISTಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಅಭಿವೃದ್ಧಿಪಡಿಸಲು ಮುಖ್ಯವಾಗಿ ಖಾಸಗಿ ಮತ್ತು ಸರ್ಕಾರಿ ಹುದ್ಧೆಗಳ ನೇಮಕಾತಿಯಲ್ಲಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು, ಆ ಮೂಲಕ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಕಂಪನಿ, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನವನ್ನು ತಪ್ಪಿಸಬೇಕು ಎಂದು ಸೊರಬದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕೆ.ಪಿ. ಮಾನ್ವಿ ಕರೂರು ಹೇಳಿದ್ದಾರೆ.