ದಲಿತರ, ಮಹಿಳೆಯರ ರಕ್ಷಣೆಯಲ್ಲಿ ಸರ್ಕಾರ ವಿಫಲ
Dec 17 2023, 01:45 AM ISTರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.