ಭೂ ಕುಸಿತಕ್ಕೆ ಹೋಮ್ ಸ್ಟೇಗಳೇ ಕಾರಣ ಎನ್ನುವಂತೆ ಸರ್ಕಾರ ಬಿಂಬಿಸುತ್ತಿದೆ
Aug 08 2024, 01:33 AM IST ಸಕಲೇಶಪುರ ತಾಲೂಕಿನ ಕೆಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿರುವುದಕ್ಕೆ ರೆಸಾರ್ಟ್ ಹಾಗೂ ಹೋಂ ಸ್ಟೇಗಳೇ ಕಾರಣ ಎಂದು ರಾಜ್ಯ ಸರ್ಕಾರವೇ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಸಕಲೇಶಪುರ ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ ಮಸ್ತಾರೆ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ೭೫ ರಸ್ತೆ ಅಗಲೀಕರಣ, ಪಶ್ಚಿಮಘಟ್ಟದಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿರುವುದು ಹಾಗೂ ಪವರ್ ಪ್ರಾಜೆಕ್ಟ್‌ನಂತಹ ಇತರೆ ದೊಡ್ಡ ದೊಡ್ಡ ಯೋಜನೆಗಳನ್ನು ಮಾಡಿರುವುದರಿಂದ ತಾಲೂಕಿನಲ್ಲಿ ಭೂಕುಸಿತವಾಗಲು ಪ್ರಮುಖ ಕಾರಣವಾಗಿದೆ ಎಂದರು.