ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಸಂಚು: ಭೈರತಿ ಸುರೇಶ್
Aug 01 2024, 12:18 AM ISTಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಸಿದ್ದರಾಮಯ್ಯ. ಹಿಂದೆಯೂ ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮಸಿಂಗ್ ಮತ್ತಿತರರ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು.