ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕ್ಷಾಮ ಉದ್ಭವ

May 13 2024, 01:06 AM IST
ಬೆಳಗಾವಿ: ಪಂಚಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿರುವ ರಾಜ್ಯದ ಜನತೆಗೆ ಆರೋಗ್ಯದ ಗ್ಯಾರಂಟಿ ಇಲ್ಲದಂತಾಗಿದೆ. ಈ ಮೂಲಕ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕ್ಷಾಮ ಉದ್ಭವವಾಗಿದೆ. ಲೋಕಸಭಾ ಚುನಾವಣೆ ಗುಂಗಿನಲ್ಲಿದ್ದ ಕಾಂಗ್ರೆಸ್‌ ನಾಯಕರು ಪ್ರಚಾರದ ಸಮಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಒತ್ತಿ ಒತ್ತಿ ಹೇಳಿದರು. ಆದರೆ, ಜನರ ಆರೋಗ್ಯದ ಕುರಿತು ಯೋಚನೆ ಮಾಡದಿರುವುದರಿಂದ ಇದೀಗ ಸರ್ಕಾರಿ ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಉದ್ಭವವಾಗಿದೆ. ಗಾಯಾಳುಯೊಬ್ಬ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆದುಕೊಳ್ಳುವ ಸಮಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಔಷಧ ಕೊರತೆ ಹಾಗೂ ಸರ್ಕಾರ ನಿರ್ಲಕ್ಷ್ಯದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೋ ವೈರಲ್‌ ಆಗಿರುವುದು ಔಷಧ ಕೊರತೆಗೆ ಹಿಡಿದ ಕೈಗನ್ನಡಿಯಾಗಿದೆ.