27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ
Feb 20 2024, 01:46 AM IST ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.