ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಚಿಮ್ಮನಕಟ್ಟಿ
Feb 05 2024, 01:52 AM ISTಗುಳೇದಗುಡ್ಡ: ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು. ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.