• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಂಟಿಕೊಪ್ಪ: ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ

Feb 07 2024, 01:47 AM IST
ಜೆಸಿಐ ಸಂಸ್ಥೆ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ಪೊಲೀಸ್‌ ಇಲಾಖೆಯಿಂದ ನಡೆಸಲಾಯಿತು. ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ ಮಕ್ಕಳನ್ನುದ್ದೇಶಿಸಿ ಮಾತನಾಡಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಮಾಹಿತಿ ನೀಡಿದರು.

ಕೆಪಿ ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Feb 07 2024, 01:47 AM IST
ನಾಪೋಕ್ಲು ಸಮೀಪದ ಕಕ್ಕಬೆ ಕುಂಜಿಲ ಗ್ರಾಮದ (ಕುಂಜಿಲ ಪರಂಬು) ಕೆ.ಪಿ. ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯವನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸರ್ಕಾರಿ ಶಾಲೆಗಳ ಬಗ್ಗೆ ರಾಜಕಾರಣಿಗಳಿಗೆ ಕಾಳಜಿ ಇಲ್ಲ: ಜಾಣಗೆರೆ ವೆಂಕಟರಾಮಯ್ಯ

Feb 07 2024, 01:46 AM IST
ರಾಜ್ಯದಲ್ಲಿ ಹಲವಾರು ಕನ್ನಡ ಶಾಲೆಗಳು ಮುಚ್ಚುವಂತಹ ಸ್ಥಿತಿಗೆ ತಲುಪಿದರು ಕೂಡ ಮುಖ್ಯಮಂತ್ರಿ ಸೇರಿದಂತೆ ಶಿಕ್ಷಣ ಸಚಿವರು ಮೌನವಾಗಿದ್ದಾರೆ ಎಂದು ಹೋರಾಟಗಾರ ಹಾಗೂ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾದೇಗುಲ ಹೆಸರು ಸಾರ್ಥಕಪಡಿಸಿದ ಸರ್ಕಾರಿ ಶಾಲೆ: ಕೆ.ಎಸ್.ಆನಂದ್

Feb 07 2024, 01:45 AM IST
ಸ್ಪರ್ಧಾತ್ಮಕ ಯುಗದ ಇಂದಿನ ದಿನಗಳಲ್ಲೂ ಕಂಸಾಗರ ಗ್ರಾಮದ ಸರ್ಕಾರಿ ಶಾಲೆ 75 ವರ್ಷ ಪೂರೈಸಿ ವಿದ್ಯಾ ದೇಗುಲ ಎಂಬ ಹೆಸರನ್ನು ಸಾರ್ಥಕಪಡಿಸಿಕೊಂಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸರ್ಕಾರಿ ಕಚೇರಿಗಳಲ್ಲಿ ರೈತರ ನಿರ್ಲಕ್ಷ್ಯಕ್ಕೆ ಖಂಡನೆ

Feb 06 2024, 01:34 AM IST
ಚನ್ನಪಟ್ಟಣ: ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ರೈತರನ್ನು ನಿರ್ಲಕ್ಷಿಸುವುದಲ್ಲದೆ, ಅಧಿಕಾರಿಗಳು ಅಸಡ್ಡೆಯಿಂದ ನೋಡುತ್ತಿದ್ದು, ತಪ್ಪು ಮಾಹಿತಿ ನೀಡಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ರೈತರ ಮೇಲೆ ಅಧಿಕಾರಿಗಳ ತಾತ್ಸಾರ ಮನೋಭಾವ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಶಾಲೆಯಲ್ಲಿ ಆರ್‌ಎಸ್‌ಎಸ್ ಸಂಚಾಲಕನಿಂದ ‘ರಾಷ್ಟ್ರಧ್ವಜಾರೋಹಣ’..!

Feb 06 2024, 01:34 AM IST
ಹನುಮಧ್ವಜ ವಿವಾದದಿಂದ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ ಇದೆ. ಇದೇ ಸಮಯದಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ಆರ್‌ಎಸ್‌ಎಸ್ ಸಂಚಾಲಕನಿಂದ ಧ್ವಜಾರೋಹಣ ನೆರವೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ನಿಯಮಾವಳಿ ಉಲ್ಲಂಘಿಸಿ ಒಂದು ಧರ್ಮದ ಪರ ಒಲವು ತೋರಿರುವ ಬಗ್ಗೆ ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದಾರೆ.

75 ವರ್ಷಗಳ ನಂತರ ಕುಗ್ರಾಮಗಳಿಗೆ ಸರ್ಕಾರಿ ಬಸ್

Feb 06 2024, 01:33 AM IST
ಮಧುಗಿರಿ ಏಕಶಿಲಾ ಬೆಟ್ಟದ ಹಿಂಭಾಗದಲ್ಲಿರುವ ಸುಮಾರು ನಾಲ್ಕೈದು ಹಳ್ಳಿಗಳಿಗೆ ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಬಸ್‌ ಸೌಲಭ್ಯವೇ ಇರಲಿಲ್ಲ,ಪಟ್ಟಣದಿಂದ ಕೂಪ್ಪಚಾರಿ, ರೊಪ್ಪ ಮಾರ್ಗವಾಗಿ ಹಾವೆಕಟ್ಟೆ,ಕಮ್ನನಕೋಟೆ,ಗುಡಿರೊಪ್ಪ ಹಾಗೂ ಹರಿಹರರೊಪ್ಪ ಗ್ರಾಮಸ್ಥರಿಗೆ ಸಚಿವ ಕೆ.ಎನ್‌.ರಾಜಣ್ಣ ಮತ್ತು ಪುತ್ರ, ಎಂಎಲ್ಸಿ ಆರ್‌.ರಾಜೇಂದ್ರ ಬಸ್‌ ಸೌಲಭ್ಯ ಭಾಗ್ಯ ಕಲ್ಪಿಸಿದ್ದು, ಈ ಗ್ರಾಮಗಳ ಜನರು ,ವಿದ್ಯಾರ್ಥಿಗಳು ಬಸ್‌ ಆಗಮನ ಕಂಡು ಸಂಭ್ರಮಪಟ್ಟರು.

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Feb 06 2024, 01:33 AM IST
ರಾಮನಗರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲೆಯ 115 ವಿದ್ಯಾರ್ಥಿಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸರ್ಕಾರಿ ಸಂಸ್ಥೆಗಳಿಂದಲೇ ಎಫ್‌ಎಸ್‌ಎಸ್‌ಎಐನಿಯಮ ಉಲ್ಲಂಘನೆ, ಅಧಿಕಾರಿಗಳು ಮೌನ

Feb 06 2024, 01:30 AM IST
ಪಡಿತರ ಸಾಮಗ್ರಿ ದಾಸ್ತಾನು ಇಡುವ, ಮಾರಾಟ ಮಾಡುವ, ಆಹಾರ ತಯಾರಿಸುವ ಬಹುತೇಕ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರವಾನಗಿ ಪಡೆದಿಲ್ಲ.

ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಚಿಮ್ಮನಕಟ್ಟಿ

Feb 05 2024, 01:52 AM IST
ಗುಳೇದಗುಡ್ಡ: ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು. ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 181
  • next >

More Trending News

Top Stories
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved