ಪುನಃ ಸರ್ಕಾರಿ ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳು
Jan 03 2025, 12:32 AM ISTವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ಸಮಯದಲ್ಲಿ ತಾಲೂಕಿನ ಗ್ರಾಮೀಣ ಭಾಗದ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರ ಶ್ರಮ ಹಾಗೂ ವೃತ್ತಿಯ ಮೇಲಿರುವ ಶ್ರದ್ಧೆಯಿಂದಾಗಿ, ಖಾಸಗಿ ಶಾಲೆಗಳನ್ನು ತೊರೆದು ಪುನಃ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಸೇರುವಂತಾಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಳೆಯ ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು, ಹಾಗೂ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದು, ಇತ್ತೀಚೆಗೆ ಪೋಷಕರು ಖಾಸಗಿ ಶಾಲೆಗಳನ್ನು ಬಿಡಿಸಿ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸುತ್ತಿದ್ದಾರೆ.