ಸರ್ಕಾರಿ ಜಾಗ ಒತ್ತುವರಿ ತೆರವಾಗದಿದ್ರೆ ಸಾಮೂಹಿಕ ಆತ್ಮಹತ್ಯೆ
Jun 16 2025, 11:48 PM ISTಸಕಲೇಶಪುರ ತಾಲೂಕು ಕಸಬಾ ವ್ಯಾಪ್ತಿಯ ರಸ್ತೆ ಅಗಲೀಕರಣಕ್ಕೆ ಬೇಕಾಗುವ ಸರ್ಕಾರಿ ಜಾಗವನ್ನು ಕಬಳಿಸುತ್ತಿರುವವರ ವಿರುದ್ಧ ಕಸಬಾ ವ್ಯಾಪ್ತಿಯ ಇನ್ಸ್ಪೆಕ್ಟರ್, ರೆವಿನ್ಯೂ ಮತ್ತು ಸಕಲೇಶಪುರ ಉಪವಿಭಾಗಾಧಿಕಾರಿಗಳು ಕ್ರಮ ತೆಗೆದುಕೊಳ್ಳಲು ವಿಳಂಬವಾದರೆ ನೊಂದ ರೈತರು ಮತ್ತು ಸಾರ್ವಜನಿಕರು ನಿಮ್ಮ ಕಚೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜ್ಯ ರೈತ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರು ನಿಮ್ಮ ಕಚೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಮೂಲಕ ರೈತರ ತೀರ್ಮಾನವಾಗಿರುತ್ತದೆ. ಮುಂದಿನ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿ ಮನವಿ ಮಾಡಿದರು.