ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ತರೋಣ
Oct 09 2025, 02:01 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹ ಯಾವುದೇ ಕಾರಣಕ್ಕೂ ಮುಕ್ತಾಯಗೊಳಿಸಬಾರದು. ನಮ್ಮ ಜಿಲ್ಲೆಯಿಂದ ನಿಯೋಗದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಳಗೊಂಡಂತೆ ಹೋರಾಟಗಾರರ ಸಮೇತ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿಕೊಂಡು ಬರೋಣ. ನಿಯೋಗದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಹೇಳಿದರು.