ಯೋಗಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು
Jun 21 2024, 01:02 AM ISTಮೈಸೂರು ನಗರದ ಕೆಆರ್ಎಸ್ ರಸ್ತೆಯ ಬೃಂದಾವನ ಬಡಾವಣೆಯಲ್ಲಿ ಎಂಟು ಎಕರೆ ಜಾಗದಲ್ಲಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಆಸ್ಪತ್ರೆಯು ಯೋಗ ಕ್ಷೇತ್ರಕ್ಕೆ ತನ್ನದೇ ಆದ ಅನುಪಮ ಕೊಡುಗೆ ನೀಡುತ್ತಿದೆ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಸಂಬಂಧಿಸಿದ ಉನ್ನತ ಶಿಕ್ಷಣ ಹಾಗೂ ರೋಗಿಗಳಿಗೆ ಪ್ರಕೃತಿ ಚಿಕಿತ್ಸೆ ಹಾಗೂ ಯೋಗಗಳ ಮುಖಾಂತರ ಚಿಕಿತ್ಸೆ ನೀಡುತ್ತಿರುವ ಏಕೈಕ ಸರ್ಕಾರಿ ಪದವಿ ಶೈಕ್ಷಣಿಕ ಸಂಸ್ಥೆ ಇದಾಗಿದೆ.