ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!
Aug 12 2024, 01:04 AM IST1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.