ಮೇರು ವ್ಯಕ್ತಿಗಳಾಗಲು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ
Sep 01 2024, 01:56 AM ISTಪೋಷಕರು ಮತ್ತು ಶಿಕ್ಷಕರು ಮಕ್ಕಳಲ್ಲಿ ಪಠ್ಯದ ಜೊತೆಗೆ ಸಾಹಿತ್ಯದ ಅಭಿರುಚಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ, ಕಸಬಾ ಹೋಬಳಿ, ನಗರ ಮತ್ತು ತಾಲೂಕು ಮಹಿಳಾ ಘಟಕ, ಹಿರೇಮಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಶ್ರಾವಣ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಸಾಹಿತ್ಯ ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ, ನಮ್ಮನ್ನು ಸುಸಂಸ್ಕೃತರನ್ನಾಗಿ ಮಾಡುತ್ತದೆ, ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡರೆ ಮೇರು ವ್ಯಕ್ತಿತ್ವ ನಮ್ಮದಾಗುತ್ತದೆ ಎಂದು ಕಿವಿಮಾತು ಹೇಳಿದರು.