ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪದಗ್ರಹಣ
Jun 14 2024, 01:08 AM ISTಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿ ಜ್ಯೋತಿ, ಶೋಭ ಇದ್ದರು.