ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಪ್ರತಿಯೊಬ್ಬರೂ ಗೌರವ ಹೊಂದಬೇಕು: ಜಿ.ಧನಂಜಯ ದರಸಗುಪ್ಪೆ
May 06 2024, 12:41 AM ISTಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತಾಗಿ ರೂಪುಗೊಂಡಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ 25 ಮಂದಿ ಸೇವೆ ಸಲ್ಲಿಸಿ, ಡಾ.ನೋಡೋಜ ಮಹೇಶ ಜೋಷಿ ಅವರು ಪ್ರಸ್ತುತ 26ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಇದುವರೆವಿಗೂ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿದ್ದು, 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲು ಪ್ರಕ್ರಿಯೆ ಪ್ರಗತಿಯಲ್ಲಿದೆ.