ನಾಳೆ, ನಾಡಿದ್ದು ಹರಿಹರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Mar 17 2024, 01:47 AM ISTಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಮ್ಮೇಳನಕ್ಕೆ ಚಾಲನೆ ನೀಡುವರು. ನಂತರ ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿ.ವಿ.ಪಾಟೀಲ್ ಮಾತನಾಡುವರು. ಡಾ.ಎಚ್ ಗಿರಿಜಮ್ಮ ಮಹಾದ್ವಾರ ಉದ್ಘಾಟನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತರಿರುವರು.