‘ನಮ್ಮ ಎಲ್ಲಾ ನ್ಯಾಯಾಲಯಗಳ ಮೇಲೆ ಒಂದು ಅತ್ಯುನ್ನತ ನ್ಯಾಯಾಲಯ ಇದೆ. ಅದೇ ಆತ್ಮಸಾಕ್ಷಿ ನ್ಯಾಯಾಲಯ. ಕೆಲವು ಸಾರಿ ನ್ಯಾಯಾಲಯಗಳಲ್ಲಿ ಎಲ್ಲರಿಗೂ ನ್ಯಾಯ ಸಿಗದೆ ಇರಬಹುದು. ಆದರೆ, ನಾವು ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು.’
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳ್ಳತನ ಮಾಡಿಲ್ಲ. ಮುಡಾ ಪ್ರಕರಣದ ವಿಚಾರದಲ್ಲಿ ಅವರು ಯಾವುದೇ ಕಾರಣಕ್ಕು ರಾಜಿನಾಮೆ ನೀಡುವ ಪ್ರಶ್ನೇಯೇ ಉದ್ಭವಿಸುವುದಿಲ್ಲ ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.