ಭಾರತವು ಎದುರಿಸುತ್ತಿರುವುದು ಕೇವಲ ಆರ್ಥಿಕ ಅಥವಾ ಸಾಮಾಜಿಕ ಅಪಾಯವಲ್ಲ, ಸಂವಿಧಾನಿಕ ಅಪಾಯವನ್ನೂ ಎದುರಿಸುತ್ತಿದೆ. ಬಿಜೆಪಿ ಆಡಳಿತವನ್ನು ನಡೆಸದೇ, ನಮ್ಮ ಗಣತಂತ್ರದ ರಚನೆಯನ್ನೇ ವ್ಯವಸ್ಥಿತವಾಗಿ ಧ್ವಂಸಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.