ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಅಧಿವೇಶನದಲ್ಲಿ ಉತ್ತರ ನೀಡದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.
ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.
ಮುಡಾ ಹಗರಣವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಎಂಟು ದಿನಗಳ ಕಾಲ ಬಿಜೆಪಿ ಮತ್ತು ಜೆಡಿಎಸ್ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಬೃಹತ್ ಸಮಾವೇಶದೊಂದಿಗೆ ತೆರೆ