ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಆರ್ಥಿಕ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸಿ ದೇಶದಲ್ಲಿ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಕ್ರೋ ಫೈನಾನ್ಸ್ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಕೋಟ್ಯಂತರ ರು. ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.