ಬಿಜೆಪಿ, ಆರ್‌ಎಸ್‌ಎಸ್, ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು, ದುಡಿಯುವ ವರ್ಗ ಮತ್ತು ಅಭಿವೃದ್ಧಿಯ ವಿರೋಧಿಗಳು. ಎಡಪಂಥೀಯ ಸಂಘಟನೆಗಳು ಮಾತ್ರ ಕಾರ್ಮಿಕರು, ಅಭಿವೃದ್ಧಿ, ಉತ್ಪಾದನೆ, ಬಡವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.